- Advertisement -
ಮಂಡ್ಯ : ಮದ್ದೂರಿನ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ತಾಲ್ಲೂಕು ಆಡಳಿತ , ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ , ಪುರಸಭೆ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತು. ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಮತ್ತು ತಾಲ್ಲೂಕು ದಂಡಾಧಿಕಾರಿ ವಿಜಯ್ ಕುಮಾರ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವಿಚಾರಧಾರೆಯ ಕುರಿತು ಮಾತನಾಡಿದ್ರು.. ಕಾರ್ಯಕ್ರಮದಲ್ಲಿ ಇಓ ಜಿ.ಮುನಿರಾಜ , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಾವ್ಯಶ್ರೀ , ಬಿಇಓ ಮಹದೇವು , ಮುಖ್ಯಾಧಿಕಾರಿ ಮುರುಗೇಶ್ , ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಭಾಗಿಯಾಗಿದ್ರು.
ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ
- Advertisement -