Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ ರದ್ದುಗೊಳಿಸುವುದು ಸರಿಯಲ್ಲ. ಮಹಾತ್ಮ ಗಾಂಧಿಯವರ ಭಾವಚಿತ್ರ ತೆಗೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ. ಮಹಾತ್ಮಾ ಗಾಂಧಿಯವರು ಈ ದೇಶದ ಮಹಾನ್ ನಾಯಕರು. ಅಂತವರ ಭಾವಚಿತ್ರ ತೆಗೆಯುವ ಕೆಲಸ ಸರಿಯಲ್ಲ. ನಿರಂತರವಾಗಿ ಕಾಂಗ್ರೆಸ್ ವಿರುದ್ದ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ತಕ್ಷಣವೇ ಈ ನಿರ್ಧಾರ ಕೈಬಿಟ್ಟು ಮಸೂದೆ ವಾಪಸು ಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.




