Mandya News: ಮಂಡ್ಯದಲ್ಲಿ ಕಾಂಗ್ರೆಸ್V/S ಬಿಜೆಪಿ ಹೈಡ್ರಾಮಾ.! ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ

Mandya News: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಕಾಂಗ್ರೆಸ್ ನಡೆ ಖಂಡಿಸಿದ ಬಿಜೆಪಿಗರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಂಗ್ರೆಸ್ ಕೂಡ ಮಂಡ್ಯದ ಬಿಜೆಪಿ ಕಚೇರಿ ಮುಂಭಾಗ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಅದನ್ನೆಲ್ಲ ಬಗೆಹರಿಸುವುದನ್ನು ಬಿಟ್ಟು ಕಾಂಗ್ರೆಸ್ ಗೂಂಡಾಗಿರಿ ಮಾಡುತ್ತಿದೆ ಎಂದು ಬಿಜೆಪಿಗರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹ ಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ವಿರುದ್ಧ ಜನರ ಆಕ್ರೋಶ ಹೆಚ್ಚಾಗುತ್ತಿದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬಿಜೆಪಿ ಹಾಗೂ ಬಿಜೆಪಿ ನಾಯಕರ ವಿರುದ್ಧ ‌ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಗೃಹಲಕ್ಷ್ಮಿ ಹಣ ನುಂಗಿದ ಕಾಂಗ್ರೆಸ್ ಗೋವಿಂದ ಗೋವಿಂದ ಎಂದು ಘೋಷಣೆ ಕೂಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಕೂಡ ಪ್ರತಿಭಟಿಸಿತು.

About The Author