Tuesday, October 14, 2025

Latest Posts

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

- Advertisement -

Mandya News:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ, ಅಡಿಗೆ ಮನೆ, ಆಫೀಸ್ ರೂಮ್ ನಿರ್ಮಿಸಲಾಗಿದೆ. ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗಿ ನಿರ್ಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.

ನರ್ಸಿಂಗ್ ವಿದ್ಯಾರ್ಥಿನಿಯರಿಗೆ ತಮ್ಮ ವಿದ್ಯಾಭ್ಯಾಸಕ್ಕೆ ನೆರವಾಗಲು ಅನುಕೂಲಕರವಾದಂತಹ ವಿದ್ಯಾರ್ಥಿನಿಲಯದ ನಿರ್ಮಿಸಲಾಗಿದೆ ಹಾಗೆಯೇ ಇದರ ಸದುಪಯೋಗ ಪಡೆದುಕೊಂಡು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಬೇಕೆಂದು ತಮ್ಮ ಹಿತನುಡಿಗಳನ್ನು ಹೇಳಿದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂಲಭೂತ ವ್ಯವಸ್ಥೆಗಳನ್ನು ಒದಗಿಸಿ ಉತ್ತಮ ವಿದ್ಯಾಭ್ಯಾಸವನ್ನು ನೀಡಲು ಹಾಸ್ಟಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

ಉತ್ತಮವಾದ ಮೂಲಭೂತ ಸೌಕರ್ಯವನ್ನು ಒದಗಿಸಲು ಸರ್ಕಾರದ ಆಶಯದಂತೆ 3.36 ಕೋಟಿ ರೂ ವೆಚ್ಚದಲ್ಲಿ ಸದರಿ ಹಾಸ್ಟಲ್ ನ್ನು 2 ವರ್ಷಗಳ ನಿಗದಿತ ಅವಧಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿದರು.ವಿದ್ಯಾರ್ಥಿ ನಿಲಯವನ್ನು ಹಾಳು ಮಾಡದಂತೆ ಇಟ್ಟುಕೊಳ್ಳಲು ಎಲ್ಲರಿಗೂ ತಿಳಿ ಹೇಳಿದರು.ಹಾಗೇ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿನಿಯರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ನಿರ್ಮಿತಿ ಕೇಂದ್ರದ ಪಿ.ಡಿ ನರೇಶ್ ಹಾಗೂ ಇನ್ನಿತರ ಅಧಿಕಾರಿಗಳು‌ ಉಪಸ್ಥಿತರಿದ್ದರು.

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

- Advertisement -

Latest Posts

Don't Miss