Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು ಬಂಧಿಸಿದ್ದಾರೆ.

ಈತ ನಮ್ಮ ಪ್ರಧಾನಿ ಮೋದಿಜಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ ಶೂ ಹಾಕುತ್ತಿರುವಂತೆ ಇಮೇಜ್ ಎಡಿಟ್ ಮಾಡಿದ್ದ. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದ. ಈ ಕಾರಣಕ್ಕೆ ಜಾವೇದ್‌ನನ್ನು ಬಂಧಿಸಲಾಾಗಿದೆ.

ಬಿಜೆಪಿ ಕಾರ್ಯಕರ್ತರು ನೀಡಿರುವ ದೂರಿನ ಹಿನ್ನೆಲೆ ಜಾವೇದ್‌ನನ್ನು ಸ್ಥಳೀಯ ಪೋಲೀಸರು ಬಂಧಿಸಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ ಕಲಂ 152, 192, 340ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

About The Author