Mandya News: ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಕ್ರೌರ್ಯ ಮರೆದಿದ್ದಾರೆ. ಕೃಷ್ಣ ಅವರು ಜಮೀನಿಗೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ ಇಲ್ಲದ್ದನ್ನು ಮನಗಂಡ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.
ಈ ಘಟನೆಯಿಂದ ಮನೆಯಲ್ಲಿದ್ದ ಹಣ, ಚಿನ್ನ ಸೇರಿ ಹಲವು ವಸ್ತುಗಳು ನಾಶವಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




