Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ ಹಂಚಿಕೆಯಲ್ಲಿ ವಂಚನೆ, ಮೇಕೆದಾಟು ಯೋಜನೆ ಅನುಷ್ಠಾನ, ಭದ್ರ ಮೇಲ್ದಂಡೆಗೆ ಅನುದಾನ ಬಿಡುಗಡೆ, ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡಬೇಕು, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ನೀಡಬೇಕು, ಕರ್ನಾಟಕಕ್ಕೆ ನ್ಯಾಯಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.




