ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅರಸೀಕೆರೆ ಕ್ಷೇತ್ರದ ಗೊಂದಲ ನಿವಾರಿಸಲು ಜೆಡಿಎಸ್ ಕಾರ್ಯಕರ್ತರಿಂದ ಆಗ್ರಹ : ಸಮಾಧಾನಪಡಿಸಲು ಹೆಚ್.ಡಿ. ರೇವಣ್ಣ ಹರಸಾಹಸ
ಪ್ರಧಾನಿ ನರೇಂದ್ರ ಮೋದಿಯವರ ತಾಯಿಯ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ ಸ್ವಾಮೀಜಿ ಅವರು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಕೃಷಿಗೆ ಹೆಚ್ಚಿನ ನೆರವು ನೀಡುವ ಅಗತ್ಯತೆ ಇದೆ ಅದಕ್ಕಾಗಿ ಸಹಕಾರ ಕ್ಷೇತ್ರ ಸುಧಾರಣೆಯಾಗಬೇಕು. ಮಂಡ್ಯವನ್ನು ಆರ್ಥ ಮಾಡಿಕೊಂಡರೆ ಇಂಡಿಯಾವನ್ನು ಅರ್ಥ ಮಾಡಿಕೊಂಡಂತೆ. ಮಂಡ್ಯದಲ್ಲಿ ಅತೀ ಹೆಚ್ಚಿನ ಪ್ರಮಾಣದ ಹಾಲು ಉತ್ಪಾದನೆ ಮಾಡಲಾಗುತ್ತಿದೆ. ಮೆಗಾ ಡೇರಿಯ ಸ್ಥಾಪನೆಯಿಂದ ಹಾಲು ಉತ್ಪಾದಕರಿಗೆ ಅನುಕೂಲವಾಗಿದೆ ಎಂದು ಸ್ವಾಮೀಜಿ ಹೇಳಿದರು. ಇದೇ ಸಂದರ್ಭದಲ್ಲಿ ಮನ್ ಮುಲ್ ಕೈಪಿಡಿಯನ್ನು ಗಣ್ಯರು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಅಬಕಾರಿ ಹಾಗೂ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ ನಾರಯಣಗೌಡ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ, ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಾಂತ ಎಲ್ ಹುಲ್ಮನಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ : ಬಸವರಾಜ ಬೊಮ್ಮಾಯಿ
ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ, 2 ಲಕ್ಷ ಪ್ರೈಮರಿ ಡೇರಿ ನಿರ್ಮಿಸಲು ತೀರ್ಮಾನ : ಅಮಿತ್ ಶಾ