ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಂಧಿತ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು. ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆ ಸ್ಥಳೀಯವಾಗಿ ಅಕ್ರಮ ಚಟುವಟಿಕೆಗಳ ವಿರುದ್ಧ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಸಂದೇಶ ನೀಡಿದೆ.

About The Author