Mandya News: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದರೆ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾರಕ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಮುದ್ದ ಹನುಮೇಗೌಡ ಸೋಲು ಕಂಡಿದ್ದಾರೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆದ್ದಿದ್ದು ಮೃಣಾಲ್ ಹೆಬ್ಬಾಳ್ಕರ್ ಸೋಲನ್ನಪ್ಪಿದ್ದಾರೆ. ಚಾಮರಾಜಗರದಲ್ಲಿ ಕಾಂಗ್‌ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಬಿಜೆಪಿ ಅಭ್ಯರ್ಥಿ ಬಾಲರಾಜು ವಿರುದ್ಧ ಜಯ ಗಳಿಸಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಗೆಲುವು ಸಾಧಿಸಿದ್ದು, ಶ್ರೀರಾಮುಲು ಲೋಕಸಭೆ ಚುನಾವಣೆಯಲ್ಲೂ ಸೋಲುಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲೂ ಶ್ರೀರಾಮುಲು ಸೋತಿದ್ದರು.
ಉತ್ತರಕನ್ನಡ ಜಿಲ್ಲೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದು, ಅಂಜಲಿ ನಿಂಬಾಳ್ಕರ್ ಸೋಲನ್ನಪ್ಪಿದ್ದಾರೆ. ಇನ್ನು ಉಡುಪಿ, ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಗೆದ್ದಿದ್ದು, ಕಾಂಗ್‌ರೆಸ್‌ನ ಆನಂದ್ ಸೋಲನ್ನಪ್ಪಿದ್ದಾರೆ.
Lok Sabha Election 2024: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಶುರು
ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್
ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ