- Advertisement -
ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ಕಬ್ಬು ದರ, ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು, ಸಿದ್ದರಾಮಯ್ಯಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದಾರೆ. ಸರ್ಕಾರ ರೈತರನ್ನ ಕಡೆಗಣಿಸುತ್ತಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -