Friday, December 13, 2024

Latest Posts

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

- Advertisement -

Mandya News:

ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು.

ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.ಅಂಬಾರಿ ಹೊತ್ತ ಮಹೇಂದ್ರನ ಜೊತೆ ಕಾವೇರಿ ಮತ್ತು ವಿಜಯ ಆನೆಗಳು ಹೆಜ್ಜೆ ಹಾಕಿದವು. ವೀರಗಾಸೆ, ಡೊಳ್ಳುಕುಣಿತ, ಟಮಟೆ, ಸೋಮನ ಕುಣಿತ, ನವಿಲು ಕುಣಿತ ಸೇರಿದಂತೆ ಹತ್ತಾರು ಕಲಾ ತಂಡಗಳ ಪ್ರದರ್ಶನ ಮನಸೂರೆಗೊಳಿಸಿತು.

ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಹುಲ್ಮನಿ,ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್,ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರೆನ್,ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಂದಾಮೂರ್ತಿ, ಆರ್.ಐಶ್ವರ್ಯ, ತಹಶೀಲ್ದಾರ್ ಗಳಾದ ಶ್ವೇತಾ ಎನ್.ರವೀಂದ್ರ , ಸೇರಿದಂತೆ ಡಾ.ಭಾನುಪ್ರಕಾಶ್ ಸ್ವಾಮೀಜಿ, ಇತರರು ಈ  ಶುಭ ಘಳಿಗೆಗೆ ಸಾಕ್ಷಿಯಾದ್ರು .

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನದ ವಿಶೇಷ :

ಶ್ರೀರಂಗಪಟ್ಟಣ ದಸರಾ ಜಂಬೂ ಸವಾರಿಗೆ ಕ್ಷಣಗಣನೆ

ಸಾವಿರ ವರ್ಷ ಮೊಸಳೆಯ ಜೊತೆ ಗಜೇ೦ದ್ರನ ಕಾದಾಟ…!

- Advertisement -

Latest Posts

Don't Miss