Friday, October 18, 2024

Latest Posts

ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

- Advertisement -

Mandya News:

ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಇದರಿಂದ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ಹಾದಿ ಸುಗಮವಾಗಿದೆ. ಈಗಾಗಲೇ  ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ 7 ವಿವಿಗಳ ಸ್ಥಾಪನೆ ಬಗ್ಗೆ ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದೀಗ ಮಂಡ್ಯ ದಲ್ಲೂ ನೂತನ ವಿವಿ ಸ್ಥಾಪನೆಗೆ ಅವಕಾಶ ಕಲ್ಪಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ್ ಅವರಿಗೆ ಹಾಗೂ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೆ ಸಚಿವ ಡಾ.ನಾರಾಯಣಗೌಡ ಅವತು ಜನ್ಯವಾದ ಅರ್ಪಿಸಿದ್ದಾರೆ. ಮಂಡ್ಯದ ಸರ್ಕಾರಿ ಕಾಲೇಜ್‌ನ್ನು ವಿಶ್ವ ವಿದ್ಯಾಲಯವನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಮಂಡ್ಯ ಜಿಲ್ಲೆಯ ಎಲ್ಲಾ ಕಾಲೇಜುಗಳು ಇದರ ವ್ಯಾಪ್ತಿಗೆ ಸೇರಲಿವೆ.

ನುಡಿದಂತೆ ನಡೆಯುವುದು ನಮ್ಮ ಸರ್ಕಾರ- ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ: ಸಚಿವ ಡಾ.ನಾರಾಯಣಗೌಡ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣತೊಟ್ಟಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ದುಡಿಯಲಾಗುತ್ತಿದೆ. ನೀರಾವರಿ ಯೋಜನೆಗಳು, ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭ, ಮೈಷುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿದೆ. ನುಡಿದಂತೆ ನಡೆಯುವುದೇ ನಮ್ಮ ಸರ್ಕಾರದ ಬದ್ದತೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕಂಕಣಕಟ್ಟಿ ದುಡಿಯಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಹೊಸ ಯೋಜನೆಗಳನ್ನು ತರಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -

Latest Posts

Don't Miss