- Advertisement -
ಮಂಡ್ಯ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು, ಒಂದೇ ಜಿಲ್ಲೆಯ 1,639 ಮಕ್ಕಳಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮಕ್ಕಳು ನಲುಗುತ್ತಿದ್ದಾರೆ. 1-5 ವರ್ಷದ 46 ಮಕ್ಕಳು ಹಾಗೂ 6-18 ವರ್ಷದ 1,593 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಈವರೆಗೆ 1639 ಮಕ್ಕಳಿಗೆ ಸೋಂಕು ಪತ್ತೆಯಾಗಿದ್ದು, ಸೋಂಕಿತ ಮಕ್ಕಳನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್ ಒ ಡಾ.ಧನಂಜಯ್ ಮಾಹಿತಿ ನೀಡಿದ್ದಾರೆ.
- Advertisement -