Saturday, May 25, 2024

Latest Posts

Mangaluru News: ಬೆಳ್ತಂಗಡಿ ಮಾಜಿ ಶಾಸಕ ವಸಂತ್ ಬಂಗೇರಾ ನಿಧನ

- Advertisement -

Political News: ಮಾಜಿ ಶಾಸಕ ವಸಂತ್ ಬಂಗೇರಾ(79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ್ ಬಂಗೇರಾ ಚಿಕಿತ್ಸೆ ಫಲಿಸದೇ, ಕೊನೆಯುಸಿರೆಳೆದಿದ್ದಾರೆ. ನಾಳೆ ಬಂಗೇರಾ ಅವರ ಹುಟ್ಟೂರಾದ ಬೆಳ್ತಂಗಡಿ ತಾಲೂಕಿಗೆ ಅವರ ಪಾರ್ಥಿವ ಶರೀರ ತರಲಾಗುತ್ತಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ.

ವಸಂತ್ ಬಂಗೇರಾ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಮೂರು ಪಕ್ಷಗಳಲ್ಲೂ ಅವರು ಗುರುತಿಸಿಕೊಂಡಿದ್ದರು. 8 ಬಾರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದರೂ, 5 ಬಾರಿ ಗೆದ್ದು ಶಾಸಕರಾಗಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದರು. 1994ರಲ್ಲಿ ಜನತಾ ದಳದ ಅಭ್ಯರ್ಥಿಯಾಗಿ ಗೆದ್ದು ಶಾಸಕರಾಗಿದ್ದರು. 2008 ಮತ್ತು 2013ರಲ್ಲಿ ವಸಂತ್ ಬಂಗೇರಾ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.

ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ರಿಲ್ಯಾಕ್ಸ್ ಮೂಡ್‌ನಲ್ಲಿ..!

ಪತಿಯ ಬಗ್ಗೆ ನಗೆ ಚಟಾಕಿ ಹಾರಿಸಿದ ಜೋಶಿ ಪತ್ನಿ ಜ್ಯೋತಿ ಜೋಶಿ

ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ರಾರಾಜಿಸಿದ ಪೋಸ್ಟರ್‌ಗಳು

- Advertisement -

Latest Posts

Don't Miss