Manglore News:
ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ.
ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, ಐವರು ಪುರುಷರಲ್ಲಿ ಇಬ್ಬರು ವೈದ್ಯಕೀಯ ಅಧಿಕಾರಿಗಳು ಮತ್ತು ಮೂವರು ಎಂಬಿಬಿಎಸ್ ಮತ್ತು ಬಿಡಿಎಸ್ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.
ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ ನೀಡ್ತಾರಾ ಸಿಎಂ..?!