Manglore News:
ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್‌ಗಳ ಹೆಸರನ್ನು ಘೋಷಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.




