ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕುಲದೀಪ್ ಕುಮಾರ್ ಜೈನ್

Manglore News: Feb:24: ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಇಂದು  ಫೆಬ್ರವರಿ 24 ರಂದು ಅಧಿಕಾರ ಸ್ವೀಕರಿಸಿ ಮಾತನಾಡಿದ ಕುಲದೀಪ್ ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲ‌ ರೀತಿಯ ಅಕ್ರಮ ಚಟುವಟಿಕೆ ತಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ … Continue reading ಮಂಗಳೂರು: ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕುಲದೀಪ್ ಕುಮಾರ್ ಜೈನ್