ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 5 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ನಮ್ಮ ವಿಚಾರಕ್ಕೆ ಬಂದರೆ ತಕ್ಕ ಪಾಠ ಕಲಿಸುತ್ತೇವೆ ಇಡೀ ಜಗತ್ತೇ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಕಾರ್ಯಕ್ರಮದಲ್ಲಿ ಹೇಳಿದರು.
ಜೆಡಿಎಸ್ ಪಂಚರತ್ನ ಯಾತ್ರೆಗೆ ಹೆಚ್.ಡಿ. ದೇವೇಗೌಡರಿಂದ ಅದ್ದೂರಿ ಚಾಲನೆ
ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆಗೆ ಬುದ್ಧಿವಂತಿಕೆ ಅವಶ್ಯಕ ರಾಮನಿಗಿಂತ ರಾವಣ ಜ್ಞಾನಿಯಾಗಿದ್ದನು. ವಿವೇಕ ಇದ್ದಿದ್ದರಿಂದ ಜನ ರಾಮನನ್ನು ಪೂಜಿಸುತ್ತಾರೆ. ವಿಜ್ಞಾನ ತಂತ್ರಜ್ಞಾನದಲ್ಲಿ ಭಾರತ ಸಾಕಷ್ಟು ಸಾಧನೆ ಮಾಡಿದೆ. ಮೈಕ್ರೋಸಾಫ್ಟನ್ನು ಮೀರಿಸುವಂತ ಕಂಪನಿ ಭಾರತದಲ್ಲಿ ಸ್ಥಾಪನೆಯಾಗಬೇಕು. ವಿಶ್ವದ 3ನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿದೆ, 2047ರ ವೇಳೆಗೆ ಮೊದಲ ಸ್ಥಾನದಲ್ಲಿ ಭಾರತ ನಿಲ್ಲುತ್ತದೆ ಎಂದು ಸಚಿವ ರಾಜನಾಥ್ ಸಿಂಗ್ ಹೇಳಿದರು.