ಮಹದೇವಪುರ:- ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಮತ ಪ್ರಚಾರ ನಡೆಸಿದರು.
ಮಹದೇವಪುರ ಕ್ಷೇತ್ರಕ್ಕೆ ಸ್ಟಾರ್ ಪ್ರಚಾರಕರಾಗಿ ಆಗಮಿಸಿರುವ ಅವರು ದೊಡ್ಡನೆಕ್ಕುಂದಿ ವಾಡ್೯ ಸೇರಿದಂತೆ ಕ್ಷೇತ್ರದ ಹಲವೆಡೆ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಪರ ಅಬ್ಬರದ ಪ್ರಚಾರ ನಡೆಸಿದರು, ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆಯಿದ್ದು ಪಕ್ಷ ಮಹಿಳೆಯರನ್ನು ರಾಜಕೀಯವಾಗಿ ಸಮಾಜದ ಮುಖ್ಯವಾಹಿನಿಗೆ ತರುವ ಸಲುವಾಗಿ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಮಣೆ ಹಾಕಲಾಗಿದೆ.ಮಹಿಳೆಯರು ಮಂಜುಳಾ ಲಿಂಬಾವಳಿಯವರನ್ನು ಬೆಂಬಲಿಸಲು ಉತ್ಸಕರಾಗಿದ್ದು ಭಾರಿ ಅಂತರದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..
40 ಮಹಿಳೆಯರಿಗೆ ಒಬ್ಬನೇ ಗಂಡ..? : ಪರಿಶೀಲಿಸಿದಾಗ ತಿಳಿಯಿತು ಸತ್ಯಸಂಗತಿ..