www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈ ಹಿಂದೆ ಅಂದ್ರೆ, 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004 ರಲ್ಲಿ ಸ್ಟೆಂಟ್ ಕೂಡ ಅಳವಡಿಸಲಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನಮೋಹನ್ ಸಿಂಗ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಅಂತ ಸಿಂಗ್ ಕುಟುಂಬದ ಮೂಲಗಳು ತಿಳಿಸಿವೆ. ಇನ್ನು ಸಿಂಗ್ ಕಳೆದ ತಿಂಗಳ 26ರಂದು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಇನ್ನು ಮಾಜಿ ಪ್ರಧಾನಿ ಬೇಗನೇ ಗುಣಮುಖರಾಗಲಿ ಅಂತ ಕಾಂಗ್ರೆಸ್ ನಾಯಕರು ಹಾರೈಸಿದ್ದಾರೆ.




