Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ ನಾಳೆ ಅಂದ್ರೆ ಡಿಸೆಂಬರ್ 27ಕ್ಕೆ ಸರ್ಕಾರಿ ರಜೆ ಘೋಷಿಸಿದ್ದಾರೆ.
ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶವಿತ್ತು. ಆದರೆ ಮನಮೋಹನ್ ಸಿಂಗ್ ನಿಧನರಾಗಿರುವ ಕಾರಣಕ್ಕೆ, ಕಾರ್ಯಕ್ರಮವನ್ನು ರದ್ದುಗೊಳಿಸಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದಾರೆ.
ಇಂದು ಸಂಜೆ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿಕೆಶಿ, ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.