Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ ಒದಗಿಬಂದಿದೆ. ಮೈಸೂರಿನ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಪ್ರಭು ಶ್ರೀರಾಮನ ವಿಗ್ರಹ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೆ ಆಯ್ಕೆಯಾಗಿದ್ದು, ವಿಶೇಷವಾಗಿ ರಾಜ್ಯದ ಸಮಸ್ತ ಭಕ್ತ ಜನತೆಯ ಹೆಮ್ಮೆ, ಸಂತಸಗಳನ್ನು ದುಪ್ಪಟ್ಟುಗೊಳಿಸಿದೆ. ರಾಜ್ಯಕ್ಕೂ ರಾಮಮಂದಿರಕ್ಕೂ ಮತ್ತೊಂದು ವಿಶೇಷ ನಂಟನ್ನು ಸಾಧ್ಯವಾಗಿಸಿರುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರಿಗೆ ಅಭಿಮಾನಪೂರ್ವಕ ಅಭಿನಂದನೆಗಳು ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು ಮೈಸೂರಿನ ಬಾಲರಾಮನು ಬೆಳಗುವನು” ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ, ಕರುನಾಡ ಹೆಮ್ಮೆಯಾಗಿದೆ. ರಾಮನ ಭಂಟ ಹನುಮಂತನು ಹುಟ್ಟಿರುವ ನಮ್ಮ ಕನ್ನಡನಾಡಿನಲ್ಲಿ, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅದೇ ರೀತಿ ಶ್ರೀರಾಮನ ವಿಗ್ರಹವೂ ಕರ್ನಾಟಕದ ಶಿಲ್ಪಿಯಿಂದಲೇ ಕೆತ್ತನೆಯಾಗಿರುವುದು ಭಾವನಾತ್ಮಕ ಭಕ್ತಿ ತರಿಸಿದೆ. ಅಂತರಾಷ್ಟ್ರೀಯ ಗಮನ ಸೆಳೆದ ಕೇದಾರನಾಥದ ಆದಿ ಶಂಕರಚಾರ್ಯ, ದೆಹಲಿಯ ಇಂಡಿಯಾ ಗೇಟ್ ಬಳಿಯ ಸುಭಾಷ್ ಚಂದ್ರ ಬೋಸ್, ಇದೀಗ ವಿಶ್ವ ಹಿಂದೂಗಳ ಹೃದಯದಲ್ಲಿ ನೆಲೆಸಲಿರುವ ಅಯೋಧ್ಯೆಯ ಬಾಲ ರಾಮನ ಮೂರ್ತಿಯ ವಿಗ್ರಹ ರೂಪಿಸಿ, ರಾಜ್ಯಕ್ಕೆ ಶ್ರೇಷ್ಠ ಕೀರ್ತಿ ತಂದ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಹಾಗೂ ಈ ಕಾರ್ಯದಲ್ಲಿ ಹೆಗಲುಕೊಟ್ಟ ಅವರ ತಂಡದವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಶ್ರೀ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ. ರಾಮದೂತ ಹನುಮಂತನ ಜನ್ಮಸ್ಥಳ ಇರುವ ಪುಣ್ಯಭೂಮಿಯಾದ ಕರ್ನಾಟಕಕ್ಕೂ ಶ್ರೀರಾಮನಿಗೂ ಅವಿನಾಭಾವ ಸಂಭವವಿದೆ. ಶ್ರೀರಾಮನ ಮೂರ್ತಿ ಕೆತ್ತುವ ಐತಿಹಾಸಿಕ ಮತ್ತು ಪುಣ್ಯ ಕಾರ್ಯದಲ್ಲಿ ಭಾಗಿಯಾದ ಕರುನಾಡಿನ ಹೆಮ್ಮೆಯ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರಿಗೆ ಹೃದಯ ಪೂರ್ವಕ ಅಭನಂದನೆಗಳು.
“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನು
ಮೈಸೂರಿನ ಬಾಲರಾಮನು ಬೆಳಗುವನು”ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿರುವುದು ಮೈಸೂರಿನ ಹಿರಿಮೆ,… pic.twitter.com/y5qxaXbmDf
— Vijayendra Yediyurappa (@BYVijayendra) January 1, 2024
ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಶ್ರೀ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ.
ರಾಮದೂತ ಹನುಮಂತನ ಜನ್ಮಸ್ಥಳ ಇರುವ ಪುಣ್ಯಭೂಮಿಯಾದ… pic.twitter.com/vsxU5Apqou
— R. Ashoka (ಆರ್. ಅಶೋಕ) (@RAshokaBJP) January 1, 2024
ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪಟ್ಟಾಭಿಷೇಕದಲ್ಲಿ ವಿಶೇಷ ಪಾತ್ರ ವಹಿಸಿದ್ದನ್ನು ನೆನಪಿಸುವಂತೆ ಈಗ ಮತ್ತೊಂದು ಸುಯೋಗ ಒದಗಿಬಂದಿದೆ. ಮೈಸೂರಿನ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಪ್ರಭು ಶ್ರೀರಾಮನ ವಿಗ್ರಹ ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೆ…
— B.S.Yediyurappa (@BSYBJP) January 1, 2024
ಕರ್ನಾಟಕಕ್ಕೂ ರಾಮಾಯಣಕ್ಕೂ ಅವಿನಾಭಾವ ಸಂಬಂಧವಿದೆ. ಈಗ ಆ ಬಾಂಧವ್ಯ ಇನ್ನಷ್ಟು ಗಟ್ಟಿಗೊಳ್ಳುವ ಸನ್ನಿವೇಶ ಹಾಗೂ ನಾವೆಲ್ಲರೂ ಹೆಮ್ಮೆಪಡಬೇಕಾದ ಸಂದರ್ಭ ಸೃಷ್ಟಿಯಾಗಿದೆ.
ಹೆಮ್ಮೆಯ ಶಿಲ್ಪಿ ಮೈಸೂರಿನ ಶ್ರೀಅರುಣ್ ಯೋಗಿರಾಜ್ ಅವರು ಕೆತ್ತಿರುವ ಶ್ರೀರಾಮನ ಮೂರ್ತಿ ಅಯೋಧ್ಯೆಯ ಐತಿಹಾಸಿಕ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವುದು… pic.twitter.com/bq9FBrOIvk
— B Y Raghavendra (@BYRBJP) January 1, 2024
ಅಯೋಧ್ಯಾ ರಾಮ ಮಂದಿರದ ಮೇಲೆ ಬಾಂಬ್ ದಾಳಿ ಬೆದರಿಕೆ, ಯೋಗಿ ಆದಿತ್ಯನಾಥ್ ಹತ್ಯೆಗೂ ಸಂಚು..!
ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

