ಮಾರ್ಚ್ 31 ರಿಂದ 6ನೇ ಆವೃತ್ತಿಯ ಐಪಿಎಲ್ 2023 ಆರಂಭ

Sports News:

6ನೇ ಆವೃತ್ತಿಯ ಐಪಿಎಲ್ 2023 ರ ವೇಳಾಪಟ್ಟಿಯನ್ನು  ಐಪಿಎಲ್ ಮಂಡಳಿ ಬಿಡುಗಡೆ ಮಾಡಿದ್ದು, ವೇಳಾಪಟ್ಟಿಯ ಪ್ರಕಾರ ಪಂದ್ಯಾವಳಿಯು ಮಾರ್ಚ್ 31 ರಿಂದ ಪ್ರಾರಂಭವಾಗಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 28 ರಂದು ನಡೆಯಲಿದ್ದು, ಮೊದಲ ಪಂದ್ಯವು ಹಾಲಿ ಚಾಂಪಿಯನ್ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮತ್ತು ಪಂದ್ಯಾವಳಿಯ ಎರಡನೇ ಅತ್ಯಂತ ಯಶಸ್ವಿ ತಂಡ ಎಂಎಸ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್  ನಡುವೆ ನಡೆಯಲಿದೆ. ಟೂರ್ನಿಯ ಆರಂಭಿಕ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಮತ್ತೊಂದೆಡೆ, ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್  ತಂಡಗಳು ಮುಖಾಮುಖಿಯಾಗಲಿವೆ.

ಒಟ್ಟು 70 ಲೀಗ್ ಪಂದ್ಯಗಳು
ಈ ಬಾರಿಯ ಐಪಿಎಲ್, ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ನಗರಗಳಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮೇ 21ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ತಂಡ ತಲಾ 7 ಪಂದ್ಯಗಳನ್ನು ತವರು ನೆಲದಲ್ಲಿ ಮತ್ತು 7 ಪಂದ್ಯಗಳನ್ನು ಬೇರೆ ನೆಲದಲ್ಲಿ ಆಡಲಿದೆ.

ಆರ್ ಸಿಬಿ ಮೆಂಟರ್ ಆಗಿ ಆಯ್ಕೆಯಾದ್ರು..ಮೂಗುತಿ ಸುಂದರಿ..!

30 ಲಕ್ಷಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ 23ರ ಹರೆಯದ ಮಿನ್ನು ಮನಿ…!

3.40 ಕೋಟಿ ರೂ.ಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂಧಾನ!

About The Author