ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ವರ್ಗಾವಣೆ ವೇಳೆ ದ್ವಿತೀಯ ಪಿಯುಸಿ ಫಲಿತಾಂಶದ ಆಧಾರದಲ್ಲಿ ಹೆಚ್ಚುವರಿ ಅಂಕಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಆದ್ರೇ.. ಈ ಕ್ರಮ ಅವೈಜ್ಞಾನಿಕವಾಗಿದೆ ಎಂದು ಅನೇಕ ಉಪನ್ಯಾಸಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ತಿದ್ದುಪಡಿ ಕಾಯ್ದೆಯನ್ನು ಪ್ರಕಟಿಸಲಾಗಿದೆ. ಈ ತಿದ್ದುಪಡಿ ಕಾಯ್ದೆಯ ಸಂಬಂಧ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ಕೂಡ ನೀಡಲಾಗಿದೆ.
ಆದ್ರೇ.. ದ್ವಿತೀಯ ಪಿಯುಸಿ ಫಲಿತಾಂಶದ ಆಧಾರದ ಮೇಲೆ ವರ್ಗಾವಣೆಗೆ ಹೆಚ್ಚುವರಿ ಅಂಕ ನೀಡುವುದು ಸಹ ಅವೈಜ್ಞಾನಿಕ ಕ್ರಮವಾಗಿದೆ. ಇದರಿಂದ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳಿರುವ ಹಾಗೂ ಮಹಾನಗರಗಳಲ್ಲಿರುವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರುಗಳಿಗೆ ಅನುಕೂಲವಾದ್ರೇ, ಗ್ರಾಮೀಣ ಭಾಗದವರಿಗೆ ಅನಾನುಕೂಲವಾಗಲಿದೆ ಎಂದು ಕಿಡಿಕಾರಿದ್ದಾರೆ.




