ಹುತಾತ್ಮ ಪ್ರಾಂಜಲ್ ತಾಯಿ, ಪತ್ನಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ವಿತರಣೆ

Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ.

ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ. ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ. – ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಎಂದು ಟ್ವೀಟ್ ಮಾಡಲಾಾಗಿದೆ. 

ಯತ್ನಾಳ ಹಠಾವೋ ಆರಂಭಿಸುತ್ತೇವೆ: ಬಿಜೆಪಿ ವಕ್ತಾರರಿಂದ ಎಚ್ಚರಿಕೆ

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ

About The Author