Friday, November 22, 2024

Latest Posts

ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

- Advertisement -

ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ಬಸ್ ಹತ್ತುವಂತಿಲ್ಲ. ಬಿಎಂಟಿಸಿ ಬಸ್ ಸಿಬ್ಬಂದಿಗಳಿಗೂ ಮಾಸ್ಕ್ ಕಡ್ಡಾಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವಂತೆ ಮನವಿ ಮಾಡಿದೆ.

ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಖಚಿತಪಡಿಸಿಕೊಳ್ಳಿ : ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಪತ್ರ

ಶೀತಜ್ವರ, ಉಸಿರಾಟದ ತೊಂದರೆ ಸೇರಿ ಕೋವಿಡ್ ಲಕ್ಷಣಗಳಿದ್ದರೆ ಸೋಂಕು ಪರೀಕ್ಷೆಗೆ ಒಳಗಾಗಬೇಕು. ಇನ್ನೂ ಮೊದಲ ಹಾಗೂ ಎರಡನೇ ಡೋಸ್ ಪಡೆದವರು ಕಡ್ಡಾಯವಾಗಿ ಮೂರನೇ ಡೋಸ್ ಪಡೆಯಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸಿದ್ದರೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಬಹುದಾಗಿದೆ. ಮಾಸ್ಕ್ ಇಲ್ಲವಾದಲ್ಲಿ ಭದ್ರತಾ ಸಿಬ್ಬಂದಿ ವಾಪಾಸು ಕಳುಸುತ್ತಿದ್ದಾರೆ. ಚೆಕಿಂಗ್ ಬಳಿಕವೂ ಮಾಸ್ಕ್ ಹಾಕಿಯೇ ಪ್ರಯಾಣಿಸುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ.

ಇದು ಸೇತುವೆ ಎಂದು ಹೇಳುವುದು ಕಷ್ಟ : ರಾಮಸೇತು ಅಸ್ತಿತ್ವದ ಬಗ್ಗೆ ಸಂಸತ್ತಿನಲ್ಲಿ ಕೇಂದ್ರದ ಪ್ರತಿಕ್ರಿಯೆ

ಭಾರತದಲ್ಲಿ ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ : ಪ್ರಧಾನಿ ಮೋದಿ

- Advertisement -

Latest Posts

Don't Miss