ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಏರಿಕೆಯ ಹಿನ್ನಲೆಯಲ್ಲಿ ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸಿ ಅಂತ ಕೂಡ ಕಡ್ಡಾಯವಾಗಿ ಸೂಚಿಸೋದಿಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಇಂದು ಕೋವಿಡ್ ನಿಯಂತ್ರ, ಮಂಕಿಪಾಕ್ಸ್ ಸೋಂಕಿನ ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆಸಿದಂತ ಸಭೆಯ ಬಳಿಕ ಮಾತನಾಡಿದಂತ ಅವರು, ಕೋವಿಡ್ ಹೆಚ್ಚಳವಾಗುತ್ತಿರುವ ಕಾರಣದಿಂದಾಗಿ ರಾಜ್ಯದ ಜನತೆ ತಪ್ಪದೇ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 3ನೇ ಡೋಸ್ ಪಡೆಯದಂತೆ 60 ವರ್ಷ ಮೇಲ್ಪಟ್ಟವರು ಕೂಡಲೇ ಪಡೆಯುವಂತೆ ಮನವಿ ಮಾಡಿದರು.

ಮಂಕಿಪಾಕ್ಸ್ ಸೋಂಕು ರಾಜ್ಯದಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ನಿಯಂತ್ರಣ ಕ್ರಮವಾಗಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಲೇರಿಯಾ, ಮಂಗನ ಕಾಯಿಲೆ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

About The Author