Saturday, April 20, 2024

Latest Posts

BREAKING NEWS: ರಾಜ್ಯಾಧ್ಯಂತ ಮತ್ತೆ ಮಾಸ್ಕ್ ಕಡ್ಡಾಯ – ರಾಜ್ಯ ಸರ್ಕಾರ ಆದೇಶ

- Advertisement -

ಬೆಂಗಳೂರು: ಕಳೆದ 10 ದಿನಗಳಿಂದ ನಿರಂತರವಾಗಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಮುಚ್ಚಿದ ಸ್ಥಳಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸೋದು ಕಡ್ಡಾಯ. ಈ ಪಬ್, ಬಾರ್, ರೆಸ್ಟೋರೆಂಟ್, ಕಚೇರಿ, ಕಾರ್ಖಾನೆಗಳಲ್ಲಿ ಜನರು ಮಾಸ್ಕ್ ಧರಿಸೋದು ಕಡ್ಡಾಯ. ಮಾಸ್ಕ್ ಧರಿಸಿದ್ದರೆ ಮಾತ್ರವೇ ಒಳ ಪ್ರವೇಶಿಸಲು ಅವಕಾಶ ನೀಡುವಂತೆ ಸೂಚಿಸಿದೆ.

ಇದಲ್ಲದೇ ಸ್ವಂತ ವಾಹನ, ಸಾರ್ವಜನಿಕ ಸಾರಿಗೆಗಳಾದಂತ ಬಸ್, ರೈಲುಗಳಲ್ಲಿ ಪ್ರಯಾಣಿಸೋ ಸಂದರ್ಭದಲ್ಲಿಯೂ ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಇನ್ನೂ ಸಾರಿ, ಐಎಲ್ಐ ಲಕ್ಷಣಗಳಿರೋಲು, ಹೈರಿಸ್ಕ್ ಗುಂಪಿನ ಜನರು, ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರೋರು ಆದ್ಯತೆಯ ಮೇರೆಗೆ ಪರೀಕ್ಷೆಗೆ ಒಳಪಡುವಂತೆ ಹೇಳಿದೆ.

ಕೋವಿಡ್ ಬೂಸ್ಟರ್ ಡೋಸ್, ಕೋವಿಡ್ ಮುನ್ನಚ್ಚರಿಕೆ ಡೋಸ್ ಪಡೆಯುವಂತೆ ತಿಳಿಸಿದೆ. ಈ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

- Advertisement -

Latest Posts

Don't Miss