Hubballi News: ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ರೈತರ ಸಾಲ ಮನ್ನಾ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೆಳೆ ವಿಮೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರೈತರು ನಗರದಲ್ಲಿ ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ದ ಸಿಡಿದೆದ್ದ ರೈತರು ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು.
ರೈಲ್ವೆ ನಿಲ್ದಾಣದ ಡಾ ಅಂಬೇಡ್ಕರ್ ಸರ್ಕಲ್ ನಿಂದ ಹುಬ್ಬಳ್ಳಿಯ ರಾಣಿ ಚನ್ನಮ್ಮಾ ಸರ್ಕಲ್ ವರಗೆ ಪ್ರತಿಭಟನಾ ಮೆರವಣಿಗೆ ಮಾಡಿ ನಂತರ ಸರ್ಕಲ್ ನಲ್ಲಿ ಸಾಂಕೇತಿಕವಾಗಿ ಧರಣಿಯನ್ನು ಮಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಗಳೂರು ಸೇರಿದಂತೆ ಹಲವು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಈ ಒಂದು ಪ್ರತಿಭಟನೆ ನಡೆಯಿತು.
ಧಾರವಾಡ ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ ಅನ್ನದಾತರು ರೈತರ ಸಾಲ ಮನ್ನಾ,ಮೂರು ಕ್ರಷಿ ಕಾಯ್ದೆ ವಾಪಾಸ್ಸು,ರಾಜ್ಯಾದ್ಯಂತ ಬರಗಾಲ ಸೇರಿದಂತೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ವನ್ನು ಮಾಡಿ, ರಾಜ್ಯ ಸರ್ಕಾರಕ್ಕೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯವನ್ನು ಮಾಡಿದರು.
‘ಪೆನ್’ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’
ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ