Sunday, November 24, 2024

Latest Posts

Raj Bhavan Chalo: ಸಿದ್ದರಾಮಯ್ಯ ಪರ ಅಹಿಂದ ಬೃಹತ್ ಹೋರಾಟ.. ಆಗಸ್ಟ್​ 27ರಂದು ರಾಜಧಾನಿ ಸ್ತಬ್ಧ?

- Advertisement -

ಬೆಂಗಳೂರು: ರಾಜ್ಯದಲ್ಲಿ ಪ್ರಾಸಿಕ್ಯೂಷನ್ (Prosecution)​ ಪಾಲಿಟಿಕ್ಸ್​ ಜೋರಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Tawar Chand Gehlot) ವಿರುದ್ಧ ಸಿಡಿದೆದ್ದಿರುವ ಅಹಿಂದ ವರ್ಗದ ನಾಯಕರು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ. ಆಗಸ್ಟ್ 27ರಂದು ರಾಜಭವನ ಚಲೋ (Raj Bhavan Chalo)ಗೆ ಅಹಿಂದ ಸಂಘಟನೆಗಳು ಕರೆ ನೀಡಿದ್ದು, ಸಿಎಂ ಪರ ಶೋಷಿತ ಸಮುದಾಯಗಳ ಒಕ್ಕೂಟ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

 

ಸಿಎಂ ಪರ ಬೃಹತ್ ಹೋರಾಟಕ್ಕೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ನೇತೃತ್ವದಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಆಗಸ್ಟ್‌ 27ಕ್ಕೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು, ಬೆಂಗಳೂರಿನ ಹೃದಯ ಭಾಗವಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ.

ಆಗಸ್ಟ್​ 27ರಂದು ಬೆಂಗಳೂರು ಸಂಪೂರ್ಣವಾಗಿ ಸ್ತಬ್ಧವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ರಾಜಭವನ ಚಲೋ ಹೋರಾಟದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಲು ಕಾಂಗ್ರೆಸ್​ ನಾಯಕರು ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಶೋಷಿತ ಸಮುದಾಯಗಳ ಒಕ್ಕೂಟ ಹಾಗೂ ಅಹಿಂದ ನಾಯಕರು ಪಾಲ್ಗೊಳ್ಳಲಿದ್ದಾರೆ.

ರಾಜಭವನ ಚಲೋ ಹೋರಾಟದ ಬಗ್ಗೆ ಈಗಾಗಲೇ ಸಚಿವ ಸತೀಶ್​ ಜಾರಕಿಹೊಳಿ ನಿವಾಸದಲ್ಲಿ ಅಹಿಂದ ನಾಯಕರು ಚರ್ಚೆ ನಡೆಸಿದ್ದಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಾಗೂ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ವಿರುದ್ಧ ಬೃಹತ್ ಹೋರಾಟ ನಡೆಸುವ ಜೊತೆಜೊತೆಗೆ ಸಿಎಂ ಸಿದ್ದರಾಮಯ್ಯ ಪರ ಅಹಿಂದ ಶಕ್ತಿ ಪ್ರದರ್ಶನಕ್ಕೂ ರಣತಂತ್ರ ರೂಪಿಸಲಾಗಿದೆ.

ಶಕ್ತಿ ಪ್ರದರ್ಶನ ನಡೆಸುವ ಮೂಲಕ ಉಳಿದ ಮೂರುವರೆ ವರ್ಷ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ಸಂದೇಶ ರವಾನಿಸಲು ಸಿದ್ದು ಬಣ ಪ್ಲ್ಯಾನ್ ಮಾಡಿದೆ. ಈ ಮೂಲಕ ಪಕ್ಷದೊಳಗಿನ ರಾಜಕೀಯ ವಿರೋಧಿಗಳು ಹಾಗೂ ಪ್ರತಿಪಕ್ಷಗಳಿಗೆ ನೇರ ಸಂದೇಶ ರವಾನಿಸಲು ಸಿದ್ದರಾಮಯ್ಯ ಬಣದ ನಾಯಕರು ತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗ್ತಿದೆ.

- Advertisement -

Latest Posts

Don't Miss