Friday, December 6, 2024

Latest Posts

“ಮ್ಯಾಕ್ಸ್” ಬಿಡುಗಡೆ ದಿನಾಂಕ ಫಿಕ್ಸ್!

- Advertisement -

Sandalwood News: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಆಕ್ಷನ್ ಚಿತ್ರ “ಮ್ಯಾಕ್ಸ್” ಇದೇ ಡಿಸೆಂಬರ್ 25ರಂದು ಬಿಡುಗಡೆ ಆಗುವುದಾಗಿ ಚಿತ್ರ ತಂಡ ಇಂದು ಘೋಷಿಸಿದೆ‌. ಚಿತ್ರದ ರಿಲೀಸ್ ದಿನಾಂಕವನ್ನು ತಿಳಿಸಿ ಎಂಬ ಅಭಿಮಾನಿಗಳ ಬಹು ಕಾಲದ ಬೇಡಿಕೆಯನ್ನೀ ಚಿತ್ರ ತಂಡ ಇಂದು ಪೂರೈಸಿದೆ‌.

“ಮ್ಯಾಕ್ಸ್” ಒಂದು ಮಾಸ್ ಚಿತ್ರವಾಗಿದ್ದು, ಇದನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿರುತ್ತಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ವರಲಕ್ಷ್ಮೀ ಶರತ್ ಕುಮಾರ್, ಸಂಯುಕ್ತ ಹೊರನಾಡು, ಪ್ರಮೋದ್ ಶೆಟ್ಟಿ, ಮತ್ತು ಮುಂತಾದವರು ಈ ಚಿತ್ರದಲ್ಲಿ ನಟಿಸಿರುತ್ತಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ, ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿರುತ್ತಾರೆ.

- Advertisement -

Latest Posts

Don't Miss