Friday, April 11, 2025

Latest Posts

ಮೇ 20 ರಿಂದ ಚಿತ್ರಮಂದಿರಗಳಲ್ಲಿ “ಪ್ರಾರಂಭ”ವಾಗಲಿದೆ ನೋಡಿ ಹಾರೈಸಿ

- Advertisement -

 

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ ” ಪ್ರಾರಂಭ ” ಚಿತ್ರ‌ ಇದೇ ಇಪ್ಪತ್ತರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ “ಪ್ರಾರಂಭ” ವಾಯಿತು. ಎರಡು ವರ್ಷ ಕೋವಿಡ್ ನಿಂದ ವಿಳಂಬವಾಯಿತು. ಇದೇ ಇಪ್ಪತ್ತರಂದು ಬಿಡುಗಡೆಗೆ ದಿನಾಂಕ ನಿಗದಿಯಾಯಿತು.‌ ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಮನು ಕಲ್ಯಾಡಿ.

ಇದು ನನ್ನ ಅಭಿನಯದ ನಾಲ್ಕನೇ ಚಿತ್ರ. ಪ್ರೀತಿ ಕೈ ಕೊಟ್ಡರೆ, ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ. ಆದರೆ ಅದು ತಪ್ಪು. ನಮಗೂ ಅಪ್ಪ, ಅಮ್ಮ, ಅಕ್ಕ, ತಂಗಿ, ಅಣ್ಣ, ತಮ್ಮ ಹೀಗೆ ಕುಟುಂಬ ಇರುತ್ತದೆ ಎಂಬುದನ್ನು ಯೋಚಿಸಿ ಮುನ್ನಡೆಯಬೇಕು. ಇಂತಹ ಕಥೆ “ಪ್ರಾರಂಭ” ದಲ್ಲಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನೋಡಿ ಹರಸಿ ಎನ್ನುತ್ತಾರೆ ನಾಯಕ ಮನುರಂಜನ್ ರವಿಚಂದ್ರನ್.

ನನ್ನ ಪಾತ್ರ ಚೆನ್ನಾಗಿದೆ. ಬಿಡುಗಡೆಗೆ ಕಾತುರದಿಂದ ಕಾಯುತ್ತಿರುವುದಾಗಿ ನಾಯಕಿ ಕೀರ್ತಿ ಕಲ್ಕೇರಿ ತಿಳಿಸಿದರು. ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಪ್ರಾರಂಭ” ಚಿತ್ರವನ್ನು ಬಿಡುಗಡೆ ಮಾಡುವುದಾಗಿ ವಿತರಕ ವೆಂಕಟ್ ತಿಳಿಸಿದರು. ಸುಂದರಸ್ಥಳಗಳಲ್ಲಿ ಚಿತ್ರೀಕರಿಸಿರುವಿದಾಗಿ ಛಾಯಾಗ್ರಾಹಕ ಸುರೇಶ್ ಬಾಬು ಹೇಳಿದರು.

ಚಿತ್ರ ಇದೇ ಇಪ್ಪತ್ತರಂದು ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಜಗದೀಶ್ ಕಲ್ಯಾಡಿ. ಅನೇಕ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು “ಪ್ರಾರಂಭ”ದ ಬಗ್ಗೆ ಮಾತನಾಡಿದರು.

- Advertisement -

Latest Posts

Don't Miss