ಬೀದರ್ನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಆನ್ಲೈನ್ ಗೇಮ್ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ MBBS ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚವ್ಹಾಣ್ (21) ಎಂದು ಗುರುತಿಸಲಾಗಿದೆ.
ಇವರು ಬೀದರ್ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ವ್ಯಾಸಂಗ ಮಾಡುತ್ತಿದ್ದರು. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾ ನಿವಾಸಿಯಾಗಿದ್ದ ಅನಿಷ್ಕಾರ್, ವಸತಿ ನಿಲಯದ ಕೊಠಡಿಯಲ್ಲಿ ಪ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಲೈನ್ ಗೇಮ್ನಲ್ಲಿ ಸುಮಾರು 80 ಸಾವಿರ ರೂಪಾಯಿ ಕಳೆದುಕೊಂಡಿದ್ದರಿಂದ ಮನನೊಂದು ಈ ಕೃತ್ಯಕ್ಕೆ ಶರಣಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಮಾಹಿತಿ ನೀಡಿದ ಅವರು, ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಸಂಪೂರ್ಣ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಸಂಬಂಧ ಪೋಷಕರು ದೂರು ನೀಡಲು ಮುಂದಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಲಾವಣ್ಯ ಅನಿಗೋಳ




