Saturday, August 9, 2025

Latest Posts

ಮನೆಯೊಳಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆ

- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ.

ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ ನಡೆದಿದೆ.

ಸಂಪತ್ ಸಿಂಗ್ ಎಂಬವರ ಮನೆಗೆ ನುಗ್ಗಿದ ಮೂವರು ಕೃತ್ಯವೆಸಗಿದ್ದಾರೆ. ವ್ಯಾಕ್ಸಿನ್ ಹಾಕುವುದಾಗಿ ಮನೆಯೊಳಗಡೆ ಬಂದು ದರೋಡೆ ನಡೆಸಿದ್ದಾರೆ. ಪಿಸ್ತೂಲ್ ತೋರಿಸಿ 150 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಯಶವಂತಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆನ್ನಲಾಗಿದೆ.

- Advertisement -

Latest Posts

Don't Miss