www.karnatakatv.net : ಬೆಂಗಳೂರು : ನಾನು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದರಿಂದ ನನ್ನ ಕ್ಷೇತ್ರದ ಜನರು ಬಹಳ ಸಂತಸವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಕ್ಷೇತ್ರದ ಅಭಿವೃದ್ಧಿ ಸದಾಕಾಲ ಮಾಡಿಕೊಂಡು ಬಂದಿದ್ದೇನೆ. ಇನ್ನೂ ವೇಗವಾಗಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ.ಈ ಜನ್ಮ ಇರುವವರೆಗೂ ಜನರ ಸೇವೆ ಮಾಡಲು ಸಿದ್ಧ ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ನಾನು ಮುಖ್ಯ ಮಂತ್ರಿ ಎನ್ನುವದಕ್ಕಿಂತ ನಾನು ಎಲ್ಲರಲ್ಲೂ ನಾನು ಒಬ್ಬ ಎಂದು ನನ್ನ ಕೆಲಸವನ್ನು ಮಾಡುತ್ತೆನೆ.. ದಲಿತರು ಹಾಗೂ ರೈತರೂ ಮತ್ತು ಹಿಂದುಳಿದ ವರ್ಗದವರಿಗೆ ಕ್ಷೇಮಾಭಿವೃದ್ದಿಗೆ ಕೆಲಸವನ್ನು ಮಾಡುತ್ತೆನೆ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಧ್ಯಾಹ್ನ 01 ಗಂಟೆಗೆ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಸುದ್ದಿಗೋಷ್ಠಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು