Wednesday, August 20, 2025

Latest Posts

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಸಿ..!

- Advertisement -

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ.

ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಜನರು ತಮ್ಮ ಇ-ಆಸ್ತಿ, ಭೂಮಿ ಒತ್ತುವರಿ, ದಾಖಲೆಗಳ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸದರು.

ಜನರೊಂದಿಗೆ ಜನಸ್ನೇಹಿ ಜಿಲ್ಲಾಡಳಿತ ಎಂಬುವಂತ ಘೋಷ ವಾಕ್ಯದೊಂದಿಗೆ ಜನರ ಅಹವಾಲು ಸ್ವೀಕರಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಮುಂದಾಗಿದ್ದು, ಜನರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

- Advertisement -

Latest Posts

Don't Miss