Tuesday, April 15, 2025

Latest Posts

ಮೇಘಾ ಶೆಟ್ಟಿಗೆ ಈಗ ಬಹುಭಾಷಾ ಸಿನಿಮಾಗೆ ಆಫರ್..!

- Advertisement -

www.karnatakatv.net: ಎಲ್ಲರ ಮನೆಮಾತಾಗಿದ್ದ ಜೊತೆ ಜೊತೆಯಲಿ ಧಾರಾವಾಹಿಯ ನಟಿ ಮೇಘಾ ಶೆಟ್ಟಿ ಈಗ ದೊಡ್ಡ ಆಫರ್ ದೊಂದಿಗೆ ಸಿನಿ ಲೋಕಕ್ಕೆ ಬರಲಿದ್ದಾರೆ.

ಮೊದಲು ಅವರು ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ತ್ರಿಬಲ್ ರೈಡಿಂಗ್ ಚಿತ್ರದಲ್ಲಿ ನಟಿಸಿದ್ದರು ಈಗ ಮತ್ತೊಂದು ದೊಟ್ಟ ಆಫರ್ ನೋಂದಿಗೆ ನಟಿಸಲಿರುವ ಅವರು ಹೊಸ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ಮರಾಠಿ, ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಮೂಡಿಬರಲಿದೆ ಎಂಬುದು ವಿಶೇಷವಾಗಿದೆ. ಈ ಸಿನಿಮಾದಲ್ಲಿ ಹೊಸ ನಟ ಕವೀಶ್ ಶೆಟ್ಟಿ ಅವರು ನಾಯಕನಾಗಿ ನಟಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಮೇಘಾ ಶೆಟ್ಟಿ ಅಭಿನಯಿಸಲಿದ್ದಾರೆ. ಈ ಹಿಂದೆ ‘ಜಿಲ್ಕಾ’ ಸಿನಿಮಾದಲ್ಲಿ ನಟಿಸಿದ್ದ ಕವೀಶ್ ಶೆಟ್ಟಿ ಅವರಿಗೆ ಇದು ಎರಡನೇ ಚಿತ್ರ. ಅದ್ದೂರಿ ಬಜೆಟ್ ನಲ್ಲಿ ಈ ಸಿನಿಮಾ ಮೂಡಿಬರಲಿದೆ. ಹಲವು ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸಡಗರ ರಾಘವೇಂದ್ರ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಶೀಘ್ರವೇ ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದ್ದು, ನವೆಂಬರ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ ಎಂದು ತಿಳಿಸಿದ್ದಾರೆ.

‘ನಮ್ಮ ಸಿನಿಮಾದಲ್ಲಿ ಅದ್ಭುತವಾದ ಒಂದು ಕಥೆ ಇರಲಿದೆ. ಮೇಕಿಂಗ್ ಅದ್ದೂರಿಯಾಗಿರಲಿದೆ. ಕನ್ನಡ, ಮರಾಠಿ ಸೇರಿ ಹಲವು ಭಾಷೆಯ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಾರೆ. ನುರಿತ ತಂತ್ರಜ್ಞರು ಕೆಲಸ ಮಾಡಲಿದ್ದಾರೆ’ ಎಂದಿದ್ದಾರೆ ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಹೇಳಿದ್ದಾರೆ.

- Advertisement -

Latest Posts

Don't Miss