ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಸಂಗಪ್ಪನನ್ನು ಮಲ್ಲಪ್ಪ ಕೊಲಕಾರ್, ಪರಸಪ್ಪ, ಬಸಪ್ಪ, ಪ್ರಭು ನಾಟಿಕರ್ ಎಂಬುವವರು ಕೈಕಾಲು ಕಟ್ಟಿ ಥಳಿಸಿದ್ದಾರೆ. ಖಾಲಿ ಜಮೀನೊಂದರಲ್ಲಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ, ಎರಡು ದಿನಗಳ ನಂತರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಈ ಘಟನೆಗೂ ಮೊದಲೇ ಅಕ್ರಮ ಸಂಬಂಧ ಹೊಂದಿದ್ದ ಸಂಗಪ್ಪ ಹಾಗೂ ಮಹಿಳೆ ವಿಚಾರವಾಗಿ ಊರಿನಲ್ಲಿ ನ್ಯಾಯ ಪಂಚಾಯಿತಿ ನಡೆಸಲಾಗಿತ್ತು. ಪಂಚಾಯಿತಿಯಲ್ಲಿ 2 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಜೊತೆಗೆ ಸಂಗಪ್ಪನ ಮದುವೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸಬ್ ರೆಜಿಸ್ಟರ್ ಕಚೇರಿಗೆ ಹೋಗುವಾಗಲೇ ದಾರಿ ಮಧ್ಯೆ ಸಂಗಪ್ಪ ಸಾವನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಸಿದ್ದರಾಮಯ್ಯಗೆ ಮತ್ತೊಂದು ಕ್ಷೇತ್ರದಿಂದ ಆಹ್ವಾನ..! ಜಮೀನು ಮಾರಟಕ್ಕೆ ಹೊರಟ ಅಭಿಮಾನಿ..?!