ರಾಜಕೀಯ ಸುದ್ದಿ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ ಮಂಡನೆ ಮಾಡಿದ್ದೂ ಕೆಲವೊಂದಿಷ್ಟು ವಸ್ತುಗಳ ಬೇಲೆ ಏರಿಕೆ ಮಾಡಿದ್ದಾರೆ. ಅದೇ ರೀತಿ ನಂದಿನಿ ಹಾಲಿದ ದರದ ಏರಿಕೆ ಬಗ್ಗೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ ದರ ಏರಿಕೆ ಮಾಡಿದರೆ ಆ ಹಣವನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ.
ಹಾಲು ಉತ್ಪಾದಕರಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ಚಿಂತನೆ ಮಾಡುತ್ತಿದೆ ಎಂದು ಸಹಕಾರ ಖಾತೆ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಈ ಮೂಲಕ ನಂದಿನ ಹಾಲಿನ ದರವನ್ನು ಹೆಚ್ಚಿಸಬಹುದು ಎನ್ನುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ. ಹಾಲಿನ ದರ ಏರಿಕೆ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ. ದರ ಹೆಚ್ಚಳ ಎಂದರೆ ಎರಡು ರೀತಿ ಇರುತ್ತದೆ. ಉತ್ಪಾದಕರಿಗೆ ಹೆಚ್ಚಿನ ದರವನ್ನು ನೀಡುವುದು, ಖರೀದಿ ಮಾಡುವವರಿಗೆ ದರ ಹೆಚ್ಚು ಮಾಡುವುದು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದಾಗ ಕರ್ನಾಟಕದಲ್ಲಿ ಈ ಎರಡೂ ಕಡಿಮೆ ಇದೆ, ಹಾಲು ಉತ್ಪಾದಕರಿಗೆ ನಾವು ನೆರವು ನೀಡಬೇಕಿದೆ. ಯಾರಿಗೂ ಹೊರೆಯಾಗದಂತೆ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು.
ಹಲವು ತಿಂಗಳಿನಿಂದ ರಾಜ್ಯದಲ್ಲಿ ನಂದಿನಿ ದರ ಹೆಚ್ಚಳದ ಬಗ್ಗೆ ಸುದ್ದಿಗಳು ಬರುತ್ತಲೇ ಇದೆ. ಬಿಜೆಪಿ ಸರ್ಕಾರದ ಅವಧಿಯಲ್ಲೇ ದರ ಹೆಚ್ಚಳ ಮಾಡಬೇಕಿತ್ತಾದರೂ, ಮಾಡಿರಲಿಲ್ಲ. ಕೆಎಂಎಫ್ ಮಾತ್ರ ನಂದಿನ ಹಾಲಿನ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ನಂದಿನ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಈಗಾಗಲೇ ಸರ್ಕಾರಕ್ಕೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದ್ದರು. ದರ ಹೆಚ್ಚಿಸುವ ಜೊತೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಪೂರೈಕೆ ಮಾಡಲು ಆದ್ಯತೆ ನೀಡುವುದಾಗಿ ಹೇಳಿದ್ದರು.