Sunday, December 22, 2024

Latest Posts

ಹಾಲಿನ ಬೆಲೆ ಜಾಸ್ತಿ ಮಾಡಲು ರೈತರ ಒತ್ತಡವಿತ್ತು: ಡಿಸಿಎಂ

- Advertisement -

ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.‌ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ‌ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜನ ಮತ್ತು ಪಕ್ಷ ಏನು ತೀರ್ಮಾನ ಮಾಡುತ್ತೆ ನೋಡೋಣ ಎಂದು ತಿಳಿಸಿದರು. ಮತದಾರರು ಏನು ಹೇಳ್ತಾರೆ ಪಕ್ಷ ಅದನ್ನ ಕೇಳುತ್ತೆ. ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ್ದೇನೆ, ದೇವರ ದರ್ಶನ ಮಾಡಿದ್ದೇನೆ. ರಾಜ್ಯಕ್ಕೆ ಮತ್ತು ಜನರಿಗೆ ದೇವರು ಒಳ್ಳೆದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ನನಗೂ ದೇವರು ಒಳ್ಳೆದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣಕ್ಕೆ ಪ್ರೀತಂ ಗೌಡ ವಿರುದ್ಧ ಎಫ್ ಐ ಆರ್ ದಾಖಲು ವಿಚಾರ ನನ್ನ ಗಮನಕ್ಕೆ‌ ಬಂದಿಲ್ಲ. ನಾನು ಮಲಗಿದ್ದವ ಈಗ ಎದ್ದದ್ದಷ್ಟೇ. ಮಂಗಳೂರಿನಿಂದ ಸುಬ್ರಹ್ಮಣ್ಯದವರೆಗೆ ಮಲಗಿಕೊಂಡೇ ಬಂದಿದ್ದೀನಿ. ನನಗೆ ಯಾರೂ ಈ ವಿಚಾರ ತಿಳಿಸಿಲ್ಲ, ನಂಗೇ ಏನೂ ಗೊತ್ತಿಲ್ಲ ಎಂದು ಹೇಳಿದರು.

- Advertisement -

Latest Posts

Don't Miss