ಕರ್ನಾಟಕ ಟಿವಿ ಹಾವೇರಿ : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು.
ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ. ವಿದ್ಯಾರ್ಥಿಗಳಲ್ಲಿರುವ ಆಸಕ್ತಿಯನ್ನು ಅರಿಯಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು. ವಿದ್ಯಾರ್ಥಿಗಳ ಪ್ರತಿಭೆಗೆ ಪ್ರೋತ್ಸಾಹ ದೊರೆತಲ್ಲಿ ಅವರು ದೇಶಕ್ಕೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್ ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.