Thursday, December 12, 2024

Latest Posts

ವೈದ್ಯಕೀಯ ಸಿಬ್ಬಂದಿಗೆ ಕೋಟಿ ನಮನಗಳನ್ನು ಸಲ್ಲಿಸಿದ ಬಿ.ಸಿ.ಪಾಟೀಲ್

- Advertisement -

ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ‌.ಸಿ‌.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.

ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದೆ. ಅದರಂತೆ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಹಾಗೂ ಸ್ವಚ್ಛತಾ ಸಿಬ್ಬಂದಿ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ್ದು , ವೈದ್ಯರು, ದಾದಿಯರು ಹಾಗೂ ಸ್ವಚ್ಛತಾ ಸಿಬ್ಬಂದಿ ಬಹಳ ಉತ್ಸುಕತೆಯಿಂದ ಕೆಲಸ ಮಾಡುತ್ತಿರುವುದು ಕಂಡು ತಮಗೆ ಸಂತಸವಾಗಿದೆ.ಕೊರೊನಾ ಸೋಂಕು ಪಸರಿಸದಂತೆ ತಡೆಯುವಲ್ಲಿ ಹಾಗೂ ಆಸ್ಪತ್ರೆಯಲ್ಲಿ ಸೋಂಕಿತರನ್ನು ನೋಡಿಕೊಳ್ಳುತ್ತಿರುವುದಕ್ಕೆ ಕೋಟಿ ನಮನಗಳನ್ನು ಸಲ್ಲಿಸಿದರು.
ಕೊರೊನಾದಂತಹ ಮಹಾಮಾರಿ‌ ರಾಜ್ಯ ಸೇರಿದಂತೆ ರಾಷ್ಟ್ರವನ್ನೇ ತಲ್ಲಣಗೊಳಿಸಿದೆ.ದೇಶವನ್ನು ಲಾಕ್ ಡೌನ್ ಗೊಳಿಸಿರುವುದು ಒಳ್ಳೆಯ ಸಂಗತಿ. ಕೊರೊನಾ ಮಹಾಮಾರಿ ಓಡಿಸಲು ಹಾಗೂ ದೇಶದ ಜನರನ್ನು ಸುರಕ್ಷಿತಗೊಳಿಸಲು ರಾಜ್ಯ ಸರ್ಕಾರ, ಮುಖ್ಯಮಂತ್ರಿ‌ಯಡಿಯೂರಪ್ಪ ಹಾಗೂ ಪ್ರಧಾನಿ‌ ನರೇಂದ್ರ ಮೋದಿ‌ ಹಗಲಿರುಳು ಶ್ರಮಿಸುತ್ತಿದ್ದಾರೆ. ಲಾಕ್ ಡೌನ್‌ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಈ ನಿಟ್ಟಿನಲ್ಲಿ‌ ಕ್ಷೇತ್ರ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.ಟಾರ್ಸ್‌ಪೋರ್ಸ್ ಮೇಲೆ ಜನರಿಗೆ ಇನ್ನಷ್ಟು ನಂಬಿಕೆ ಬರುವಂತೆ ಕೆಲಸ ಮಾಡಲಾಗುವುದು.ಲಾಕ್‌ಡೌನ್‌ಗಾಗಲೀ ಕೊರೊನಾ ಮಾರಿಗಾಗಲೀ ಜನತೆ ಭಯಪಡುವುದು ಬೇಡ‌.ಜನರ ಜೊತೆ ಸರ್ಕಾರ ಇದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

https://www.youtube.com/watch?v=fOpefm4rDKM

- Advertisement -

Latest Posts

Don't Miss