Friday, November 28, 2025

Latest Posts

ರೈತರ ಸಮಸ್ಯೆ ವಿಚಾರವಾಗಿ ಸಿಎಂ ಪರವಾಗಿ ಪ್ರಧಾನಿ ಮೋದಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

- Advertisement -

Political News: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ಮೋದಿಯವರನ್ನು ವಿಮಾನ ನಿಲ್ದಾಣದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬರೆದ ಪತ್ರ ಪ್ರಧಾನಿ ಅವರಿಗೆ ನೀಡಿರುವ ಗುಂಡೂರಾವ್ ಬೆಳೆ ಹಾನಿ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ವಿನಂತಿಸಿದರು. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬರೆದಿರುವ ಗುಂಡೂರಾವ್, ಮಾನ್ಯ ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಿ, ಅದರಲ್ಲಿರುವಂತೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ ಎಂದು‌ ತಿಳಿಸಿ, ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು.

ಈ ಪತ್ರದಲ್ಲಿ‌ರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ. ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್‌) ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು‌ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಆದ ಕಾರಣ ಈ ಬಗ್ಗೆ‌ ನಿಮ್ಮ ಗಮನಕ್ಕೆ ತಂದು ಬೆಂಬಲ ಬೆಲೆಯಲ್ಲಿ ರೈತರ‌ಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ಪತ್ರ ಬರೆಯಲಾಗಿದೆ ಎಂದಿದ್ದಾರೆ.

- Advertisement -

Latest Posts

Don't Miss