- Advertisement -
ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. 2019ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು, 6 ತಿಂಗಳಿಗೊಮ್ಮೆ ಲಸಿಕೆಯನ್ನು ನೀಡಲಾಗುತ್ತಿದೆ. ಒಂದು ತಿಂಗಳೊಳಗೆ ಮೂರನೇ ಹಂತದ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
- Advertisement -

