Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ ಮಾಡಿ ಆಧುನಿಕ ಉಪಕರಣ ಕೊಡ್ತಾ ಇದ್ದೇವೆ. 750 ಪರವಾನಗಿ ಸರ್ವೇದಾರರ ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಸರ್ವೇ ಇಲಾಖೆಯ 357 ಎಡಿಎಲ್ಆರ್ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ ಖಾಲಿ ಇರೋ 596 ಹುದ್ದೆಗಳನ್ನು ಭರ್ತಿ ಮಾಡಲು ಸಿಎಂ ಸೂಚಿಸಿದ್ದಾರೆ. ಹೀಗಾಗಿ ಖಾಲಿ ಹುದ್ದೆ ಭರ್ತಿ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಗೆ ಮುಂದಾಗಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಕೃಷ್ಣಭೈರೇಗೌಡ ಹೇಳಿದ್ದಾರೆ.
ಆಸ್ಟ್ರೇಲಿಯಾಕ್ಕೆ ಕೊಕೇನ್ ರಫ್ತು ಮಾಡುತ್ತಿದ್ದ ಭಾರತೀಯ ದಂಪತಿಯ ಬಂಧನ
ಸಾವರ್ಕರ್ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ