‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ..

ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ ಉತ್ತರ ಕೊಡಲಿ. ಮುನಿರತ್ನ, ಸುಧಾಕರ, ಎಮ್‌‌ಟಿಬಿ, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್ ಉತ್ತರ ಕೊಡಲಿ. ಅವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಚಕ್ರವರ್ತಿ ಸೂಲಿಬೆಲೆ ನಾವು ಶಿವಾಜಿ,  ಸಾವರ್ಕರ್ ವಂಶಸ್ಥರು ಎಂದು ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್‌, ನಾವು ಬಸವಣ್ಣನವರ ವಂಶಸ್ಥರು ಎಂದು ಹೇಳಿದ್ದಾರೆ. ವಿದ್ಯುತ್ ದರ ಏರಿಕೆ ಮಾಡಿದ್ದು ನಮ್ಮ ಸರ್ಕಾರ ಅಲ್ಲ. ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಮಾಡಿದೆ. ಕೆಇಆರ್‌ಸಿ ತೆಗೆದುಕೊಂಡ ನಿರ್ಧಾರದಲ್ಲಿ ಕೆಲವು ಲೋಪಗಳಿರುವುದು ಗಮನಕ್ಕೆ ಬಂದಿದೆ. ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸರಿಪಡಿಸಲಾಗುವುದು ಎಂದು ಪಾಟೀಲರು ಹೇಳಿದ್ದಾರೆ.

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

About The Author