ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಚರ್ಚೆ ಮಾಡಿದ್ದು, ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿನಿಮಾ ಚಿತ್ರೀಕರಣ ಇಲ್ಲ ಎಂದು ಹೇಳಿದರು.
ನಿರ್ಮಾಲನಾಂದ ಸ್ವಾಮೀಜಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ- ನಂಜೇಗೌಡ ಸಿನಿಮಾ ಮಾಡುವುದನ್ನ ಕೈ ಬಿಡುವಂತೆ ಸ್ವಾಮೀಜಿ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯ ಮಾತಿನಂತೆ ಸಿನಿಮಾ ನಿರ್ಮಾಣ ಮಾಡದಿರಲು ಮುನಿರತ್ನ ಘೋಷಣೆ ಮಾಡಿದರು. ನಿರ್ಮಾಲಾನಂದ ಸ್ವಾಮೀಜಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ- ನಂಜೇಗೌಡ ಸಿನಿಮಾ ಮಾಡುವುದನ್ನ ಕೈ ಬಿಡುವಂತೆ ಸ್ವಾಮೀಜಿ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿಯ ಮಾತಿನಂತೆ ಸಿನಿಮಾ ನಿರ್ಮಾಣ ಮಾಡದಿರಲು ಮುನಿರತ್ನ ಘೋಷಣೆ ಮಾಡಿದರು.
ಉರಿಗೌಡ, ನಂಜೇಗೌಡ ಚಿತ್ರ ನಿರ್ಮಾಣದ ಆಲೋಚನೆ ಇರಲಿಲ್ಲ. ಆದ್ರೆ, ಹೆಚ್ಡಿ ಕುಮಾರಸ್ವಾಮಿ ಹೇಳಿದ ಬಳಿಕ ಚಿತ್ರ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕೆಂದು ಯೋಚನೆ ಮಾಡಿದ್ದೆ. ಆದ್ರೆ, ಇದೀಗ ಈ ಚಿತ್ರ ನಿರ್ಮಾಣ ಮಾಡಲ್ಲ ಎಂದು ನಾನು ಶ್ರೀಗಳಿಗೆ ತಿಳಿಸಿದ್ದೇನೆ. ನಾನೊಬ್ಬ ನಿರ್ಮಾಪಕನಾಗಿ ಈ ಚಿತ್ರ ಮಾಡುತ್ತೇನೆ ಎಂದು ಹೇಳಿದ್ದೆ. ಎಲ್ಲವೂ ಸತ್ಯ ಘಟನೆ ಎಂದು ಸಿನಿಮಾ ಮಾಡಲು ಆಗಲ್ಲ. ಉರಿಗೌಡ, ದೊಡ್ಡ ನಂಜೇಗೌಡ ಬಗ್ಗೆ ಸಂಶೋಧನೆ ನಡೆಯುತ್ತಿದೆ ಎಂದು ಹೇಳಿದರು.ಟೈಟಲ್ ರಿಜಿಸ್ಟರ್ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿಬಿಟ್ಟಿದ್ದರು.
ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಮುನಿರತ್ನ, ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದಿದ್ದರು. ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಚಿವ ಮುನಿರತ್ನ ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ಉರೀಗೌಡ ನಂಜೇಗೌಡ ಟೈಟಲ್ಗೆ ಅರ್ಜಿ ಸಲ್ಲಿಸಿದ್ದರ ವಿರುದ್ಧ ಈಗಾಗಲೇ ಆಕ್ಷೇಪ ವ್ಯಕ್ತವಾಗಿದ್ದವು. ಒಕ್ಕಲಿಗ ಯುವಬ್ರಿಗೆಡ್ ಹಾಗೂ ಅನಿವಾಸಿ ಭಾರತೀಯ ಒಕ್ಕಲಿಗ ಯುವಬ್ರಿಗೆಡ್ ವಿರೋಧಿಸಿತ್ತು. ಅಲ್ಲದೇ ಇದಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿತ್ತು. ‘ವೃಷಭಾದ್ರಿ ಪ್ರೊಡಕ್ಷನ್ಸ್ ಅವರು ಉರೀಗೌಡ, ನಂಜೇಗೌಡ ಚಲನಚಿತ್ರ ನಿರ್ಮಿಸಲು ವಾಣಿಜ್ಯ ಮಂಡಳಿಗೆ ಮನವಿಯನ್ನು ಸಲ್ಲಿಸಿರುತ್ತಾರೆ.
ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?
‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ’