ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.
ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ಗ್ರಾಮ ಪಂಚಾಯತ್, ನರೇಗಾ ಯೋಜನೆ ಸಣ್ಣ ನೀರಾವರಿ ಸೇರಿದಂತೆ ಹಲವು ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿದರು.
2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..
ಕೆಆರ್ ಪೇಟೆಯಲ್ಲಿ ಮಳೆಯಿಂದ ಹಲವು ರಸ್ತೆಗಳು ಹಾನಿಗೊಳಗಾಗಿದ್ದು ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಆರಂಭಿಸಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ರಸ್ತೆ ವಿಸ್ತರಣೆಗೆ ತೊಡಕಾಗಿರುವ ಮರಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಸರಿಯಾಗಿ ಸ್ಪಂದಿಸದ ಡಿಸಿಎಫ್ ವಿರುದ್ದ ಸಚಿವರು ಕಿಡಿಕಾರಿದರು. ಈ ಬಗ್ಗೆ ಡಿಸಿಎಫ್ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳ ಗಮನಕ್ಕೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?
ಜಲಜೀವನ್ ಮಿಷನ್‌ಯೋಜನೆಯಡಿ ಸುಮಾರು 1080 ಕೋಟಿ ಬಿಡುಗಡೆಯಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿಗೊಳಿಸಬೇಕು. ಜೆಜೆಎಂ ಕಾಮಗಾರಿಗಳು ಕುಂಠಿತವಾಗಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಏತ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
ಕೆಆರ್ ಪೇಟೆ ತಾಲೂಕಿಗೆ ಸಣ್ಣ ನೀರಾವರಿ ಇಲಾಖೆಯಿಂದ 31 ಕಾಮಗಾರಿಗಳಿಗೆ ಸುಮಾರು 355 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು ಗುಣಮಟ್ಟ ಕಾಯ್ದುಕೊಂಡು ಶೀಘ್ರವೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.