Thursday, April 17, 2025

Latest Posts

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

- Advertisement -

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅನುದಾನದಲ್ಲಿ ಪ್ರತಿ ಡೋಸ್ ಗೆ ರೂ.5.25 ರಂತೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನ ಹೆಬ್ಬಾಳದಲ್ಲಿರುವ ರಾಜ್ಯದ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆ ವತಿಯಿಂದ 35.74 ಲಕ್ಷ ಡೋಸ್ ಲಸಿಕೆಗಳನ್ನು ರಾಜ್ಯ ಸರ್ಕಾರದಿಂದ ಜಿಲ್ಲೆಗಳಿಗೆ ವಿತರಿಸಲಾಗಿದೆ. ಚರ್ಮಗಂಟು ರೋಗದ ಚಿಕಿತ್ಸೆಗೆ ಔಷಧಿ ಮತ್ತು ಪೂರಕ ರಾಸಾಯನಿಕಗಳನ್ನು ಪೂರೈಸಲು ಹಾಗೂ ಪರಿಹಾರ ಧನ ನೀಡಲು ರೂ.11ಕೋಟಿ ಹೆಚ್ಚುವರಿ ಅನುದಾನಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ಜಾನುವಾರುಗಳಿಗೆ ಲಸಿಕೆ ಹಾಕಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇರುವುದರಿಂದ, ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ತರಬೇತಿ ಪಡೆದ ಲಸಿಕೆದಾರರು, ಮೈತ್ರಿ ಕಾರ್ಯಕರ್ತರನ್ನು ಲಸಿಕಾ ಕಾರ್ಯಕ್ರಮಕ್ಕೆ ತೊಡಗಿಸಿಕೊಳ್ಳಲಾಗಿದೆ ಎಂದು ಪಶು ಸಂಗೋಪನಾ ಸಚಿವರು, ಸದಸ್ಯರಾದ ಮಧು ಜಿ ಮಾದೇಗೌಡ, ಎಸ್ ವಿ ಸಂಕನೂರ, ಶಶಿಲ್ ಜಿ ನಮೋಶಿ, ಪ್ರಾಣೇಶ ಎಂ ಕೆ, ಎಸ್ ರವಿ, ಗೋವಿಂದರಾಜು, ಡಾ. ಡಿ.ತಿಪ್ಪಯ್ಯ ಮತ್ತು ಅ.ದೇವೇಗೌಡ ಅವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ರಾಜ್ಯದ 234 ತಾಲೂಕಿನ 15977 ಗ್ರಾಮಗಳಲ್ಲಿ ಚರ್ಮಗಂಟು ರೋಗಕ್ಕೆ 2,37,194 ಜಾನುವಾರುಗಳು ತುತ್ತಾಗಿದ್ದು, ಈ ಪೈಕಿ 1,64,254 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖ ಹೊಂದಿವೆ. ಶೇ.60.57ರಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಉಕ್ರೇನ್ ಜೀವಂತವಾಗಿದೆ ಮತ್ತು ಹೋರಾಡುತ್ತಿದೆ, ರಷ್ಯಾಕ್ಕೆ ಎಂದಿಗೂ ಶರಣಾಗುವುದಿಲ್ಲ: ವೊಲೊಡಿಮಿರ್ ಝೆಲೆನ್ಸ್ಕಿ

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಸಭೆ : ಸಿಎಂ ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss